1. Home
  2. Udupi
  3. ಉಡುಪಿ : ಒಂದೂವರೆ ವರ್ಷದ ಪುಟ್ಟ ಮಗುವಿನೊಂದಿಗೆ ವಿವಾಹಿತ ಮಹಿಳೆ ನಾಪತ್ತೆ – ಪ್ರಕರಣ ದಾಖಲು

ಉಡುಪಿ : ಒಂದೂವರೆ ವರ್ಷದ ಪುಟ್ಟ ಮಗುವಿನೊಂದಿಗೆ ವಿವಾಹಿತ ಮಹಿಳೆ ನಾಪತ್ತೆ – ಪ್ರಕರಣ ದಾಖಲು

ಉಡುಪಿ : ಒಂದೂವರೆ ವರ್ಷದ ಪುಟ್ಟ ಮಗುವಿನೊಂದಿಗೆ ವಿವಾಹಿತ ಮಹಿಳೆ ನಾಪತ್ತೆ – ಪ್ರಕರಣ ದಾಖಲು
0

ನ್ಯೂಸ್ ಆ್ಯರೋ‌ : ವಿವಾಹಿತ ಮಹಿಳೆಯೊಬ್ಬರು ತನ್ನ ಒಂದು ವರ್ಷದ ಮಗಳೊಂದಿಗೆ ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಹೂಡೆ ಎಂಬಲ್ಲಿ ನಡೆದಿದೆ.



ಪಡುತೋನ್ಸೆ ಹೂಡೆ ನಿವಾಸಿ ಉಸ್ತಾದ್ ಜುಬೈರ್ (39) ಅವರ ಪತ್ನಿ ಅನ್ಸಿಯಾ (32) ಮತ್ತು ಅವರ ಒಂದು ವರ್ಷದ ಮಗಳು ಅಜೀನ್ ನಾಪತ್ತೆಯಾದವರು.



ಆನ್ಸಿಯಾ ನ.7ರಂದು ತನ್ನ ಮಗುವಿನೊಂದಿಗೆ ಬೆಳಗ್ಗೆ 10 ಗಂಟೆಗೆ ತಾನು ಕೆಲಸ ಮಾಡುತ್ತಿರುವ ಹೈರಿಚ್ ಕಚೇರಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದು ಸಂಜೆ 5 ಗಂಟೆಯಾದರೂ ಮನೆಗೆ ಹಿಂತಿರುಗಿರಲಿಲ್ಲ.



ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ದೂರು ನೀಡಲಾಗಿದ್ದು, ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..