1. Home
  2. Udupi
  3. ಉಡುಪಿ : ವೃದ್ಧೆಯ ಚಿನ್ನ ಕದ್ದು ಪರಾರಿಯಾದ ಆರೈಕೆಗಿದ್ದ ಹೋಂ ನರ್ಸ್ – ಬಾಗಲಕೋಟೆಯಲ್ಲಿ ಅಡಗಿದ್ದ ಕಳ್ಳಿಯನ್ನು ಬಂಧಿಸಿದ ಪೋಲಿಸರು

ಉಡುಪಿ : ವೃದ್ಧೆಯ ಚಿನ್ನ ಕದ್ದು ಪರಾರಿಯಾದ ಆರೈಕೆಗಿದ್ದ ಹೋಂ ನರ್ಸ್ – ಬಾಗಲಕೋಟೆಯಲ್ಲಿ ಅಡಗಿದ್ದ ಕಳ್ಳಿಯನ್ನು ಬಂಧಿಸಿದ ಪೋಲಿಸರು

ಉಡುಪಿ : ವೃದ್ಧೆಯ ಚಿನ್ನ ಕದ್ದು ಪರಾರಿಯಾದ ಆರೈಕೆಗಿದ್ದ ಹೋಂ ನರ್ಸ್ – ಬಾಗಲಕೋಟೆಯಲ್ಲಿ ಅಡಗಿದ್ದ ಕಳ್ಳಿಯನ್ನು ಬಂಧಿಸಿದ ಪೋಲಿಸರು
0

ನ್ಯೂಸ್ ಆ್ಯರೋ : ತಾನೇ‌ ಆರೈಕೆ ಮಾಡುತ್ತಿದ್ದ ವೃದ್ದೆಯ ಕುತ್ತಿಗೆಗೆ ಕೈ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನದ ಸರ ಕದ್ದ ಹೋಂ ನರ್ಸನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ರೇಖಾ ಹೆಬ್ಬಾಳ್ಳಿ ಬಂಧಿತ ಆರೋಪಿಯಾಗಿದ್ದಾಳೆ. ಉಡುಪಿ ಉಷಾ ಮ್ಯಾರೇಜ್ ಬ್ಯುರೋ & ಜಾಬ್ ಲಿಂಕ್ಸ್ ಏಜೆನ್ಸಿ ಮುಖಾಂತರ ಹೋಂ ನರ್ಸ್ ಕೆಲಸಕ್ಕೆ ರೇಖಾ ಹೆಬ್ಬಳ್ಳಿ ಎಂಬವಳನ್ನು ಚೆನ್ನಿಬೆಟ್ಟು ಮದಗದ ನಿವಾಸಿ ವಯೋ ವೃದ್ಧೆ ಸರಸ್ವತಿ(98) ರವರ ಆರೈಕೆಯನ್ನು ನೋಡಿಕೊಳ್ಳಲು ಹೋಂ ನರ್ಸ್ ಆಗಿ ನೇಮಿಸಿದ್ದರು.

ಕೆಲವು ದಿನಗಳವರೆಗೆ ಕೆಲಸ ಮಾಡಿದ ರೇಖಾ ನವೆಂಬರ್ 21 ರಂದು ಮನೆಯಲ್ಲಿ ಯಾರೂ ಇಲ್ಲದ ಸಮಯ ಸರಸ್ವತಿಯವರ ಕುತ್ತಿಗೆಯಲ್ಲಿದ್ದ ಸುಮಾರು 1, 45,000 ಮೌಲ್ಯದ ಚಿನ್ನದ ಸರವನ್ನು ಕಳವು ಮಾಡಿ ಪರಾರಿಯಾಗಿದ್ದಳು,

ಈ ಬಗ್ಗೆ ವೃದ್ದೆ ಸರಸ್ವತಿಯವರ ಮಗ ವಸಂತ ಶೆಟ್ಟಿ ನೀಡಿದ ದೂರಿನ ಮೇರೆಗೆ ಹಿರಿಯಡ್ಕ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿ ಉಡುಪಿಯಲ್ಲಿ ರೇಖಾ ಹೆಬ್ಬಳ್ಳಿ ಬಾಗಲಕೋಟೆ ಎಂಬವಳನ್ನು ವಶಕ್ಕೆ ಪಡೆದು ಕಳವು ಮಾಡಿದ್ದ ಚಿನ್ನವನ್ನು ಸ್ವಾಧೀನ ಪಡಿಸಿಕೊಳ್ಳಲು ಯಶಸ್ವಿಯಾಗಿದ್ದರು.

ಆರೋಪಿ ರೇಖಾಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ನರ್ಸಿಂಗ್ ಏಜೆನ್ಸಿಗಳು ಕೆಲಸಕ್ಕೆ ಜನರನ್ನು ನೇಮಿಸುವರ ಬಗ್ಗೆ ಯಾವುದೇ ಪೂರ್ವಾಪರ ಮಾಹಿತಿಯನ್ನು ಪಡೆಯದೇ ನಿರ್ಲಕ್ಷ್ಯತನದಿಂದ ನೇಮಿಸುವುದರಿಂದ ಈ ರೀತಿಯ ಕೃತ್ಯಗಳು ನಡೆಯುತ್ತಿದ್ದು, ಈ ಬಗ್ಗೆ ಗಮನ ಹರಿಸಲು ಪೊಲೀಸರು ಮನವಿ ಮಾಡಿದ್ದಾರೆ.

ಉಡುಪಿ ಎಸ್‌ ಪಿ ಹಾಕೆ ಅಕ್ಷಯ ಹೆಚ್ಚುವರಿ ಎಸ್‌ಪಿ ಸಿದ್ದಲಿಂಗಪ್ಪ ಮಾರ್ಗದರ್ಶನದಲ್ಲಿ, ಉಡುಪಿ ಉಪ ವಿಭಾಗ DYSP ಸುಧಾಕರ ನಾಯ್ಕ್, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರಾದ ಅನಂತ ಪದ್ಮನಾಭರವರ ನೇತೃತ್ವದಲ್ಲಿ ಹಿರಿಯಡ್ಕ ಪೊಲೀಸ್ ಠಾಣಾ ಪಿಎಸ್‌ಐ ಅನಿಲ್ ಬಿ ಎಮ್, ಸಿಬ್ಬಂದಿಗಳಾದ ಎಎಸ್‌ಐ,ಜಯಂತ, ಸುಂದರ್,ಎಚ್.ಸಿ. ದಯಾನಂದ ಪ್ರಭು, ರಘು, ರಾಘವೇಂದ್ರ, ಕಾಮತ್, ಪಿ.ಸಿ.ಆದರ್ಶ, ಭೀಮಪ್ಪ, ನಿತಿನ್, ನಬಿ, ಕಾರ್ತಿಕ ರಾಜೇಶ್ವರಿ, ಸುರೇಖಾ, ಜ್ಯೋತಿ ನಾಗರತ್ನಾ, ಸುಮಲತಾ, ಜಯಲಕ್ಷ್ಮೀಯವರು ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..