1. Home
  2. Udupi
  3. ಮನೆಗೆ ನುಗ್ಗಿ ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷೆಯ ಪತಿಗೆ ಮಾರಣಾಂತಿಕ ಹಲ್ಲೆ‌ – ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲು

ಮನೆಗೆ ನುಗ್ಗಿ ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷೆಯ ಪತಿಗೆ ಮಾರಣಾಂತಿಕ ಹಲ್ಲೆ‌ – ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲು

ಮನೆಗೆ ನುಗ್ಗಿ ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷೆಯ ಪತಿಗೆ ಮಾರಣಾಂತಿಕ ಹಲ್ಲೆ‌ – ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲು
0

ನ್ಯೂಸ್ ಆ್ಯರೋ : ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷೆ ಶಾಂತಾ ನಾಯ್ಕ್ ಅವರ ಮನೆಗೆ ನುಗ್ಗಿದ ಯುವಕನೊಬ್ಬ ಶಾಂತಾ ಅವರ ಪತಿಗೆ ಕಬ್ಬಿಣದ ವಸ್ತುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಇಂದು ಅಲೆವೂರು ಸಮೀಪದ ಮಂಚಿಯಲ್ಲಿ ನಡೆದಿದೆ.

ಕೃಷ್ಣ ನಾಯ್ಕ್ (54) ಇರಿತಕ್ಕೆ ಒಳಗಾದವರು.

ಇಂದು ನೆರೆಮನೆಯ 23 ವರ್ಷದ ಯುವಕನೊಬ್ಬ ಕೃಷ್ಣ ನಾಯ್ಕ್ ಅವರ ಮನೆಗೆ ನುಗ್ಗಿ ಅವರಿಗೆ ಕಬ್ಬಿಣದ ಸಲಕರಣೆಯಿಂದ ಇರಿದು ಪರಾರಿಯಾಗಿದ್ದಾನೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಧಿಕ ರಕ್ತಸ್ರಾವವಾಗಿರುವ ಕಾರಣ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಭೇಟಿ ನೀಡಿದ ಮಣಿಪಾಲ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.