ನ್ಯೂಸ್ ಆ್ಯರೋ : ರೋಸ್ ಸಮಾರಂಭದಲ್ಲಿ (ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ಕಾರ್ಯಕ್ರಮ) ರಕ್ತದೊತ್ತಡ ಕಡಿಮೆಯಾಗಿ ಕುಸಿದುಬಿದ್ದು ಯುವತಿಯೋರ್ವಳು ಮೃತಪಟ್ಟ ಘಟನೆ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದ್ದು, ಯುವತಿ ಕುಸಿದುಬೀಳುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ.
ಅವರು ಕಳೆದ 23ರ ರಾತ್ರಿ ಕೊಳಲಗಿರಿ ಹಾವಂಜೆಯ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಸಮಾರಂಭಕ್ಕೆ ತೆರಳಿದ್ದರು. ಅಲ್ಲಿ 8.30ರ ಸುಮಾರಿಗೆ ಏಕಾಏಕಿಯಾಗಿ ರಕ್ತದ ಒತ್ತಡ ಕಡಿಮೆಯಾದ ಪರಿಣಾಮ ಜೋಸ್ನಾ ಅವರು ಅಲ್ಲೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು.
ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಬೆಳಿಗ್ಗೆ ಜೋಸ್ನಾ ಅವರು ಕೊನೆಯುಸಿರೆಳಿದಿದ್ದರು.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..