1. Home
  2. Udupi
  3. ಉಡುಪಿ : ರೋಸ್ ಕಾರ್ಯಕ್ರಮದ ವೇಳೆ ಕುಸಿದು ಬಿದ್ದ ಯುವತಿ – ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು

ಉಡುಪಿ : ರೋಸ್ ಕಾರ್ಯಕ್ರಮದ ವೇಳೆ ಕುಸಿದು ಬಿದ್ದ ಯುವತಿ – ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು

ಉಡುಪಿ : ರೋಸ್ ಕಾರ್ಯಕ್ರಮದ ವೇಳೆ ಕುಸಿದು ಬಿದ್ದ ಯುವತಿ – ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು
0

ನ್ಯೂಸ್ ಆ್ಯರೋ : ಸಂಬಂಧಿಕರ ರೋಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೊಬ್ಬಳು ಕುಸಿದು ಬಿದ್ದಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಹಾವಂಜೆಯಲ್ಲಿ ನಡೆದಿದೆ

ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ (23) ಎಂದು ಗುರುತಿಸಲಾಗಿದೆ.

ಜೋಸ್ನಾ ಅವರು ಬುಧವಾರ ರಾತ್ರಿ ಕೊಳಲಗಿರಿ ಹಾವಂಜೆಯ ತನ್ನ ಸಂಬಂಧಿಕರ ಮನೆಗೆ ಬಂದಿದ್ದರು. ರಾತ್ರಿ ಸುಮಾರು 8.30 ಸುಮಾರಿಗೆ ಜೋಸ್ನಾ ಅವರು ಕುಳಿತಲ್ಲೇ ಕುಸಿದುಬಿದ್ದಿದ್ದರು.

ತಕ್ಷಣ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ಸಂಬಂಧಿಕರು ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಜೋಸ್ನಾ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..