1. Home
  2. National
  3. &
  4. International
  5. National
  6. News
  7. ಮಣಿಕಂಠನ ಶಬರಿಮಲೆ ಯಾತ್ರಾರ್ಥಿಗಳಿಗೆ ವಿಶೇಷ ರೈಲು ವ್ಯವಸ್ಥೆ – ಕರ್ನಾಟಕದಿಂದ ಕೇರಳಕ್ಕೆ ಪ್ರಥಮ ಬಾರಿಗೆ ವಿಶೇಷ ಸೇವೆ

ಮಣಿಕಂಠನ ಶಬರಿಮಲೆ ಯಾತ್ರಾರ್ಥಿಗಳಿಗೆ ವಿಶೇಷ ರೈಲು ವ್ಯವಸ್ಥೆ – ಕರ್ನಾಟಕದಿಂದ ಕೇರಳಕ್ಕೆ ಪ್ರಥಮ ಬಾರಿಗೆ ವಿಶೇಷ ಸೇವೆ

ಮಣಿಕಂಠನ ಶಬರಿಮಲೆ ಯಾತ್ರಾರ್ಥಿಗಳಿಗೆ ವಿಶೇಷ ರೈಲು ವ್ಯವಸ್ಥೆ – ಕರ್ನಾಟಕದಿಂದ ಕೇರಳಕ್ಕೆ ಪ್ರಥಮ ಬಾರಿಗೆ ವಿಶೇಷ ಸೇವೆ
0

ನ್ಯೂಸ್ ಆ್ಯರೋ : ಈ ವರ್ಷದ ಶಬರಿಮಲೆ ಮಂಡಲಕಾಲ ಯಾತ್ರೆಗೆ ಕರ್ನಾಟಕದಿಂದ ಕೇರಳಕ್ಕೆ ಪ್ರಥಮ ಬಾರಿಗೆ ವಿಶೇಷ ರೈಲು ಮಂಜೂರಾಗಿದ್ದು, ಈ ಬಗ್ಗೆ ರೈಲ್ವೆ ಪ್ರಯಾಣಿಕರ ಸೌಕರ್ಯ ಸಮಿತಿ ಅಧ್ಯಕ್ಷ ಪಿ.ಕೆ. ಕೃಷ್ಣದಾಸ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ವಿಜಯಪುರ ನಿಲ್ದಾಣದಿಂದ ಕೊಟ್ಟಾಯಂಗೆ ಸೇವೆಯು ನವೆಂಬರ್ 7 ರಿಂದ ಪ್ರಾರಂಭವಾಗಲಿದೆ. ಫೆಬ್ರವರಿ 1ರವರೆಗೆ ಸೇವೆ ಮುಂದುವರಿಯಲಿದೆ. ರೈಲನ್ನು ಚೆಂಗನ್ನೂರು ವರೆಗೆ ವಿಸ್ತರಿಸುವ ಸಾಧ್ಯತೆ ಇದೆ ಎಂದು ಸೂಚಿಸಲಾಗಿದೆ.

ಇದಲ್ಲದೆ ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಿಂದ ಹಿಂದಿನ ವರ್ಷಗಳಂತೆಯೇ ವಿಶೇಷ ಸೇವೆಗಳು ಇರಲಿವೆ. ಯಾತ್ರೆಗೆ ಸಂಬಂಧಿಸಿದಂತೆ ಪ್ರತಿದಿನ ಎರಡು ವಿಶೇಷ ರೈಲುಗಳು ಸಂಚರಿಸಲಿವೆ.

ಇದೇ ವೇಳೆ, ಚೆಂಗನ್ನೂರು-ಪಂಬಾ ಎಲಿವೇಟೆಡ್ ರೈಲ್ವೇಗೆ ಸಂಬಂಧಿಸಿದಂತೆ ಹಲವು ಯೋಜನೆಗಳನ್ನು ಸಲ್ಲಿಸಲಾಗಿದೆ. ಆದರೆ ರೈಲ್ವೆ ಮಂಡಳಿ ಮಟ್ಟದಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೃಷ್ಣದಾಸ್ ಹೇಳಿರುವರು.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..