ನ್ಯೂಸ್ ಆ್ಯರೋ : ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕಾಲೇಜುಗಳ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಶೇ 10ರಷ್ಟು ಮೀಸಲಾತಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಸೋಮವಾರ ಈ ಸಂಬಂಧ ಐವರ ನ್ಯಾಯಾಧೀಶರ ಸಾಂವಿಧಾನಿಕ ಪೀಠದಲ್ಲಿ ನಾಲ್ವರು ನ್ಯಾಯಾಧೀಶರು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ 10% ಮೀಸಲಾತಿ ನೀಡುವ ಪರ ತೀರ್ಪನ್ನು ನೀಡಿದ್ದಾರೆ.
ಐವರ ಪೀಠದಲ್ಲಿ ಸಿಜೆಐ ಯು ಲಲಿತ್, ನ್ಯಾ. ದಿನೇಶ್ ಮಹೇಶ್ವರಿ, ನ್ಯಾ. ಬೇಲಾ ಎಂ. ತ್ರಿವೇದಿ ಮತ್ತು ನ್ಯಾ. ಪರ್ದಿವಾಲಾ ನ್ಯಾಯಮೂರ್ತಿ ರವೀಂದ್ರ ಭಟ್ ಇದ್ದರು.
ಇದು ತಾರತಮ್ಯ ಮಾಡುವುದಿಲ್ಲ, ಇದು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುವುದಿಲ್ಲ ಎಂದು ತೀರ್ಪಿನಲ್ಲಿ ಹೇಳಲಾಗಿದೆ. 50ರಷ್ಟು ಮಿತಿಯ ಕಾರಣದಿಂದಾಗಿ ಇಡಬ್ಲ್ಯು ಎಸ್ ಕೋಟಾ ಸಂವಿಧಾನವನ್ನು ಉಲ್ಲಂಘಿಸುವುದಿಲ್ಲ ಎಂದು ನ್ಯಾಯಾಧೀಶರು ಹೇಳಿದರು.
ಇಡಬ್ಲ್ಯುಎಸ್ ಮೀಸಲಾತಿಯನ್ನು 2019 ರ ಸಾರ್ವತ್ರಿಕ ಚುನಾವಣೆಯ ಮೊದಲು ಆರಂಭಿಸಲಾಗಿತ್ತು. ಮೀಸಲಾತಿಯ ಸಿಂಧುತ್ವದ ಕುರಿತು 40 ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾಗಿತ್ತು.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..