1. Home
  2. Political
  3. News
  4. ರಾಜಕೀಯ ಸನ್ಯಾಸಕ್ಕೆ ಸಿದ್ಧವಾದ್ರಾ ಡಿಕೆಶಿ‌? – ಬಿಜೆಪಿಯ ಕಿರುಕುಳ, ಬೆದರಿಕೆಗೆ ನಡುಗಿತಾ ಕನಕಪುರ ಬಂಡೆ?

ರಾಜಕೀಯ ಸನ್ಯಾಸಕ್ಕೆ ಸಿದ್ಧವಾದ್ರಾ ಡಿಕೆಶಿ‌? – ಬಿಜೆಪಿಯ ಕಿರುಕುಳ, ಬೆದರಿಕೆಗೆ ನಡುಗಿತಾ ಕನಕಪುರ ಬಂಡೆ?

ರಾಜಕೀಯ ಸನ್ಯಾಸಕ್ಕೆ ಸಿದ್ಧವಾದ್ರಾ ಡಿಕೆಶಿ‌? – ಬಿಜೆಪಿಯ ಕಿರುಕುಳ, ಬೆದರಿಕೆಗೆ ನಡುಗಿತಾ ಕನಕಪುರ ಬಂಡೆ?
0

ನ್ಯೂಸ್‌ ಆ್ಯರೋ‌ : ನನಗೆ ನೀವು ಕೊಟ್ಟಿರುವ ಪೊಷಿಷನ್ ಸಾಕು, ಇನ್ಯಾವ ಪೊಷಿಷನ್ ಬೇಡ. ನನಗೆ ಇದೀಗ 60 ವರ್ಷ ತುಂಬಿದೆ ಎಂದು ರಾಜಕೀಯಕ್ಕೆ ವಿದಾಯ ಹೇಳುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸುಳಿವು ನೀಡಿದ್ದಾರೆ.

ಆಯುಧ ಪೂಜೆ ದಿನ ಕನಕಪುರದ ತಮ್ಮ ನಿವಾಸದಲ್ಲಿ ಶಿಕ್ಷಣ ಸಂಸ್ಥೆಯ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿರುವ ವೀಡಿಯೋ ಸದ್ಯ ವೈರಲ್‌ ಆಗಿದ್ದು, ನಾನು ಇನ್ನು 8-10 ವರ್ಷ ಮಾತ್ರ ರಾಜಕೀಯದಲ್ಲಿ ಇರಬಹುದು. ಆ ನಂತರ ರಾಜಕೀಯ ಮಾಡಲು ಆಗಲ್ಲ. ಕನಕಪುರ ಕ್ಷೇತ್ರದ ಜನರು ನನಗೆ ಮತ ನೀಡಿ ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ. ನಾನು ರಾಜಕೀಯ ನಿವೃತ್ತಿ ಪಡೆಯುವುದರ ಒಳಗಾಗಿ ಈ ಶಿಕ್ಷಣ ಸಂಸ್ಥೆಯಲ್ಲಿ ಏನಾದರೂ ಬದಲಾವಣೆ ತರಬೇಕು ಎಂದು ಮಾತನಾಡಿದ್ದಾರೆ.

ಆರ್ಇಎಸ್ ಸಂಸ್ಥೆಯ ಯಾವುದೇ ಸ್ಥಾನ ಬೇಡ. ನೀವು ಕೊಟ್ಟಿರುವ ಸ್ಥಾನವೇ ಸಾಕು. ಈಗಿರುವ ವ್ಯವಸ್ಥೆಯಲ್ಲಿ‌ ನಂಬಿಕೆ ಇಲ್ಲ. ಈಗ ಬದಲಾವಣೆ ಮಾಡಲು ಸಾಧ್ಯವಿಲ್ಲವೆಂದರೆ ಜಾಸ್ತಿ ದಿನ ರಾಜಕೀಯದಲ್ಲಿ‌‌ ಇರಲು‌ ಸಾಧ್ಯವಿಲ್ಲ. ನನಗೂ 60 ವರ್ಷ ಆಯಿತು. ಇನ್ನು ಎಷ್ಟು ವರ್ಷ ರಾಜಕಾರಣ ‌ಮಾಡಬಹುದು. 70 ವರ್ಷದವರೆಗೂ ರಾಜಕಾರಣ ಮಾಡಬಹುದು. ಅಷ್ಟರಲ್ಲಿ ಏನಾದರೂ ಚೇಂಜ್ ಮಾಡಿಕೊಳ್ಳೋಣ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ನಾನು ನಿಮ್ಮಿಂದ ಯಾವುದೇ ಪ್ರತಿಫಲ ನಿರೀಕ್ಷೆ ಮಾಡುವವನಲ್ಲ. ನಾನು ಸಾಕಷ್ಟು ಸಂಪಾದನೆ ಮಾಡಿದ್ದೇನೆ. ನನ್ನ ಮೇಲೆ ಸಾಕಷ್ಟು ಕೇಸ್ಗಳು ಸಹ ಇವೆ. ಎಲ್ಲವನ್ನು ಅನುಭವಿಸುತ್ತೇನೆ. ಕನಕಪುರ ಕ್ಷೇತ್ರದ ಜನರು ನನಗೆ ಮತ ನೀಡಿ, ಶಾಸಕನನ್ನಾಗಿ ಮಾಡಿದ್ದಾರೆ. ಈ ತಾಲೂಕಿನಲ್ಲಿ ಯಾವುದಕ್ಕೂ, ಯಾರ ಮುಂದೆಯೂ ಕೈ ಚಾಚಿಲ್ಲ. ಕಮಿಷನ್ ಪಡೆದಿಲ್ಲ. ಜಾತಿಗಿಂತ ನೀತಿ ಮೇಲೆ ನನಗೆ ನಂಬಿಕೆ ಇದೆ ಎಂದು ಹೇಳಿದ್ದಾರೆ.

ಇನ್ನೂ ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಅವರ ಜಾರಿ ನಿರ್ದೇಶನಾಲಯದ(ಇಡಿ) ವಿಚಾರಣೆ ಅಂತ್ಯವಾಗಿದ್ದು, ರಾಜಕೀಯ ಕದನಗಳನ್ನು ರಾಜಕೀಯ ರಣರಂಗದಲ್ಲಿಯೇ ನಡೆಸಬೇಕು, ಸರ್ಕಾರಿ ಕಚೇರಿಗಳಲ್ಲಿ ಅಲ್ಲ ಎಂದು ಡಿಕೆಶಿ ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ರಾಜಕೀಯ ಕದನಗಳನ್ನು ರಾಜಕೀಯ ರಣರಂಗದಲ್ಲಿಯೇ ನಡೆಸಬೇಕು. BJP ತನ್ನ ರಾಜಕೀಯ ಎದುರಾಳಿಗಳಿಗೆ ಕಿರುಕುಳ ನೀಡಿ, ಬೆದರಿಸಲು ಸರ್ಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ. ಇದಕ್ಕೆ ಮೇ 2023 ರಲ್ಲಿ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ. ED ಮೂಲಕ ನಿರುದ್ಯೋಗ, ಬೆಲೆ ಏರಿಕೆಯನ್ನು ನಿಗ್ರಹಿಸಲು ಸಾಧ್ಯವಿಲ್ಲ ಎನ್ನುವುದು BJPಗೆ ಅರಿವಾಗಬೇಕಿದೆ ಎಂದು ಕಿಡಿಕಾರಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ ಸಹೋದರರು. ಹತ್ತು ವರ್ಷದ ಆಸ್ತಿ ದಾಖಲೆಗಳನ್ನು ಕೇಳಿದ್ದಾರೆ. ಎಲ್ಲವನ್ನು ಇಡಿ ಕಚೇರಿಗೆ ಸಲ್ಲಿಸಲಿದ್ದೇವೆ. ಕರೆದಾಗ ಬರಬೇಕು ಎಂದು ಹೇಳಿದ್ದಾರೆ. ಮುಂದಿನ ವಿಚಾರಣೆ ದಿನಾಂಕ ಸೂಚಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಯಂಗ್ ಇಂಡಿಯಾ ಸಂಸ್ಥೆಗೆ 25 ಲಕ್ಷ ರೂ. ದೇಣಿಗೆ ನೀಡಿದ್ದೆ. ಅದರ ಬಗ್ಗೆ ವಿಚಾರಣೆ ವೇಳೆ ಮಾಹಿತಿ ನೀಡಿದ್ದೇನೆ. ನಮ್ಮ ಕಂಪನಿಗಳಿಗೆ ಸೇರಿದ ಮತ್ತಷ್ಟು ದಾಖಲೆ ನೀಡಲು ಕೇಳಿದ್ದು, ದಾಖಲೆಗಳನ್ನು ನೀಡಲು ಕಾಲಾವಕಾಶ ಕೇಳಿದ್ದಕ್ಕೆ ಒಪ್ಪಿದ್ದಾರೆ. ಡಿಕೆಶಿ ಹಾಗೂ ನನ್ನನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದಾರೆ. ಮತ್ತೆ ಅಗತ್ಯ ಬಿದ್ದರೆ ವಿಚಾರಣೆಗೆ ಕರೆದರೆ ಬರುವಂತೆ ಸೂಚನೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..