ನ್ಯೂಸ್ ಆ್ಯರೋ : 2019ರ ಚುನಾವಣಾ ಭಾಷಣದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಮತ್ತು ದ್ವೇಷ ಭಾಷಣ ಮಾಡಿದ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಉತ್ತರ ಪ್ರದೇಶ ಸಮಾಜವಾದಿ ಪಕ್ಷದ ನಾಯಕ ಅಜಮ್ ಖಾನ್ ಅವರಿಗೆ ಇದೀಗ ಉತ್ತರ ಪ್ರದೇಶ ವಿಧಾನಸಭೆಯು ಅನರ್ಹದ ತೂಗುಗತ್ತಿ ಬೀಸಿದೆ.
ಮೊನ್ನೆ ಅಜಂ ಖಾನ್ ದೋಷಿ ಎಂದು ತೀರ್ಪು ನೀಡಿದ್ದ ಉತ್ತರ ಪ್ರದೇಶದ ರಾಮಪುರ ಕೋರ್ಟ್, ಎಸ್ ಪಿ ನಾಯಕ ಹಾಗೂ ಇತರೆ ಇಬ್ಬರು ಆರೋಪಿಗಳಿಗೆ 25,000 ರೂ ದಂಡ ಹಾಗೂ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಕೋರ್ಟ್ ತೀರ್ಪಿನ ನಂತರ, ಉತ್ತರ ಪ್ರದೇಶ ವಿಧಾನಸಭೆ ಸ್ಪೀಕರ್ ಶುಕ್ರವಾರ ಎಸ್ಪಿ ನಾಯಕ, ರಾಂಪುರ ವಿಧಾನಸಭಾ ಕ್ಷೇತ್ರದ ಶಾಸಕ ಅಜಂ ಖಾನ್ ಅವರನ್ನು ವಿಧಾನಸಭೆಯ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ಘೋಷಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ,ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅಂದಿನ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಂಜನೇಯ ಕುಮಾರ್ ಸಿಂಗ್ ವಿರುದ್ಧ ಆಜಂ ಖಾನ್ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ನಂತರ 3 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಅಜಂಖಾನ್ ರಿಗೆ ಇದೀಗ ಗಾಯದ ಮೇಲೆ ಬರೆ ಎಳೆದಂತೆ ಮತ್ತೊಂದು ಆಘಾತವಾಗಿದೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..