1. Home
  2. Political
  3. News
  4. ಕಾಂಗ್ರೆಸ್ ನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ – 24 ವರ್ಷಗಳ ಬಳಿಕ ಪಕ್ಷದ ಚುಕ್ಕಾಣಿ ಹಿಡಿದ ಗಾಂಧಿಯೇತರ ವ್ಯಕ್ತಿ

ಕಾಂಗ್ರೆಸ್ ನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ – 24 ವರ್ಷಗಳ ಬಳಿಕ ಪಕ್ಷದ ಚುಕ್ಕಾಣಿ ಹಿಡಿದ ಗಾಂಧಿಯೇತರ ವ್ಯಕ್ತಿ

ಕಾಂಗ್ರೆಸ್ ನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ – 24 ವರ್ಷಗಳ ಬಳಿಕ ಪಕ್ಷದ ಚುಕ್ಕಾಣಿ ಹಿಡಿದ ಗಾಂಧಿಯೇತರ ವ್ಯಕ್ತಿ
0

ನ್ಯೂಸ್ ಆ್ಯರೋ : ಕಾಂಗ್ರೆಸ್ ನ‌ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕೇಂದ್ರ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಇಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಕೇಂದ್ರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸೋನಿಯಾ ಗಾಂಧಿ ಅವರು ಚುನಾವಣಾ ಪ್ರಮಾಣಪತ್ರವನ್ನು ಹಸ್ತಾಂತರಿಸಿದ್ದು, 24 ವರ್ಷಗಳ ಬಳಿಕ ಮೊದಲ ಬಾರಿಗೆ ಗಾಂಧಿಯೇತರರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದಂತಾಗಿದೆ.

ಅಧಿಕಾರ ವಹಿಸಿಕೊಳ್ಳುವ ಮುನ್ನ ಖರ್ಗೆ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಭೇಟಿ ಮಾಡಿ ನೀಡಿದ್ದರು. ಬಳಿಕ ಖರ್ಗೆ ಅವರು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು ಮತ್ತು ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ, ಮಾಜಿ ಉಪ ಪ್ರಧಾನಿ ಜಗಜೀವನ್ ರಾಮ್ ಅವರ ಸ್ಮಾರಕಗಳಿಗೂ ಭೇಟಿ ನೀಡಿ ನಮನ ಸಲ್ಲಿಸಿದರು.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..