ನ್ಯೂಸ್ ಆ್ಯರೋ : ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಸದ್ಯ ಕರ್ನಾಟಕ ತಲುಪಿದ್ದು, ತನ್ನ ಪುತ್ರ ರಾಹುಲ್ ಗಾಂಧಿಗೆ ಸಾಥ್ ನೀಡಲು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕರ್ನಾಟಕಕಕ್ಕೆ ಬರಲಿದ್ದಾರೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಉತ್ಸಾಹ ಗರಿಗೆದರಿದೆ.
ಅಕ್ಟೋಬರ್ 4 ರಂದು ದೆಹಲಿಯಿಂದ ಹೊರಡಲಿರುವ ಸೋನಿಯಾ ಗಾಂಧಿಯವರು, ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಕ್ಟೋಬರ್ 4, 5ರಂದು ಕೊಡಗು ಭಾಗದ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಲಿರುವ ಅವರು, ಈ ಸಂದರ್ಭ ಕಾಂಗ್ರೆಸ್ ನಾಯಕರೊಂದಿಗೆ ಸಭೆ ಕೂಡ ನಡೆಸಲಿದ್ದಾರೆ.
ಅಕ್ಟೋಬರ್ 6ರಂದು ಪುತ್ರ ರಾಹುಲ್ ಗಾಂಧಿ ಜೊತೆಗೆ ಭಾರತ್ ಜೋಡೋ ಯಾತ್ರೆಯಲ್ಲಿ ಸಾಂಕೇತಿಕವಾಗಿ ಪಾಲ್ಗೊಂಡು ಅವರೂ ಕೂಡ ಇತರ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಲಿದ್ದಾರೆ.
ಹೀಗಾಗಿ ಕರ್ನಾಟಕದಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆ ಮಹತ್ವ ಪಡೆದುಕೊಂಡಿದೆ. ಸೋನಿಯಾರನ್ನು ರಾಜ್ಯಕ್ಕೆ ಸ್ವಾಗತಿಸಲು ಈಗಾಗಲೇ ರಾಜ್ಯ ನಾಯಕರು ಸನ್ನದ್ಧರಾಗಿದ್ದು ಸೋನಿಯಾ ಗಾಂಧಿ ಪಾಲ್ಗೊಳ್ಳುವ ದಿನ ಹೆಚ್ಚು ಜನರನ್ನು ಸೇರಿಸಲು ಕಾಂಗ್ರೆಸ್ ಸಕಲ ಸಿದ್ಧತೆ ಮಾಡುತ್ತಿದೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..