1. Home
  2. Puttur
  3. ಉಪ್ಪಿನಂಗಡಿ‌ : ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಯತ್ನ – ಪೋಕ್ಸೋ ಪ್ರಕರಣ ದಾಖಲು, ಇಬ್ಬರು ಆರೋಪಿಗಳ ಬಂಧನ

ಉಪ್ಪಿನಂಗಡಿ‌ : ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಯತ್ನ – ಪೋಕ್ಸೋ ಪ್ರಕರಣ ದಾಖಲು, ಇಬ್ಬರು ಆರೋಪಿಗಳ ಬಂಧನ

ಉಪ್ಪಿನಂಗಡಿ‌ : ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಯತ್ನ – ಪೋಕ್ಸೋ ಪ್ರಕರಣ ದಾಖಲು, ಇಬ್ಬರು ಆರೋಪಿಗಳ ಬಂಧನ
0

ನ್ಯೂಸ್ ಆ್ಯರೋ : ಮನೆಗೆ ನುಗ್ಗಿ ಬಾಲಕಿಯೋರ್ವಳನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಬಂಧಿತ ಆರೋಪಿಗಳನ್ನು ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾಗೂ ಅಬ್ಬಾಸ್ (30) ಎಂದು ಗುರುತಿಸಲಾಗಿದೆ.

ಆರೋಪಿಗಳು ಕಳೆದ ಮೂರು ದಿನಗಳಿಂದ ಮರ ತುಂಡರಿಸುವ ಕೆಲಸದ ನಿಮಿತ್ತ ಕರಾಯ ಗ್ರಾಮದಲ್ಲಿ ಕಾರ್ಯ ನಿರ್ವಹಿಸಿದ್ದು, ಈ ಸಂದರ್ಭ ನೀರು ಕೇಳುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ ಹೋಗಿದ್ದರು. ಮನೆಯಲ್ಲಿನ ಸದಸ್ಯರ ಬಗ್ಗೆ ಗಮನಿಸಿದ ಆರೋಪಿಗಳ ಪೈಕಿ ಹಸೈನಾರ್ ಶುಕ್ರವಾರ ಸಂಜೆ ಸಂತ್ರಸ್ತೆಯ ಮನೆಗೆ ಬಂದು ಮರ ತುಂಡರಿಸುವ ಚೈನ್ ಇಲ್ಲಿ ಬಾಕಿಯಾಗಿದೆ ಎಂದು ಹೇಳಿ ಬಾಲಕಿಯ ಕೈಗೆ ಚೀಟಿಯೊಂದನ್ನು ನೀಡಿ, ಈ ನಂಬ್ರರಿಗೆ ಫೋನ್ ಮಾಡು, ಇಲ್ಲದಿದ್ದರೆ ನಿನ್ನನ್ನು ಬಿಡುವುದಿಲ್ಲ ಎಂಬುವುದಾಗಿ ಜೀವ ಬೆದರಿಕೆಯೊಡ್ಡಿ ಹೋಗಿದ್ದ ಎಂದು ದೂರಲಾಗಿದೆ.

ಮರುದಿನ ರಾತ್ರಿ 8 ಗಂಟೆಯ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ತನ್ನ ಸಹಚರ ಅಬ್ಬಾಸ್ ಎಂಬಾತನೊಂದಿಗೆ ಬಂದ ಆರೋಪಿಯು ಮನೆಯ ಒಳಗೆ ಅಕ್ರಮವಾಗಿ ಪ್ರವೇಶ ಮಾಡಿ, ಬಾಲಕಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದ್ದು, ಈ ವೇಳೆ ಬಾಲಕಿ ಹಾಗೂ ಬಾಲಕಿಯ ತಾಯಿ ರಕ್ಷಣೆಗಾಗಿ ಬೊಬ್ಬೆ ಹೊಡೆದಾಗ ನೆರೆ ಮನೆಯವರು ಓಡಿ ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ. ಬಳಿಕ ಸ್ಥಳೀಯರ ಸಹಕಾರದಿಂದ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಪೋಲಿಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..