ನ್ಯೂಸ್ ಆ್ಯರೋ : ಕುಡಿದ ಮತ್ತಿನಲ್ಲಿ ತಮ್ಮನನ್ನೇ ಅಣ್ಣ ಕೊಲೆಗೈದ ಘಟನೆ ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಕಟ್ಟಡವೊಂದರಲ್ಲಿ ಕಳೆದ ರಾತ್ರಿ ನಡೆದಿದೆ.
ವೃತ್ತಿಯಲ್ಲಿ ಕಾರ್ಮಿಕರಾಗಿರುವ ಹಾವೇರಿ ಜಿಲ್ಲೆಯ ಹೊಸೂರು ನಿವಾಸಿ ನಿಂಗನ ಗೌಡ ಎಂಬಾತ ತಮ್ಮ ಒಡಹುಟ್ಟಿದ ತಮ್ಮ ಮಾದೇವಪ್ಪನನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಪುತ್ತೂರಿನ ಕೆಮ್ಮಿಂಜೆಯಲ್ಲಿ ಕಾರ್ಮಿಕ ಕೆಲಸ ಮಾಡುತ್ತಿದ್ದ ಸಹೋದರರಿಬ್ಬರು ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಜಗಳ ನಡೆಸಿದ್ದು, ಈ ವೇಳೆ ನಿಂಗನ ಗೌಡನು, ಮಾದೇವಪ್ಪನ ಮೇಲೆ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಬಳಿಕ ಆರೋಪಿ ನಿಂಗನ ಗೌಡ ಪರಾರಿಯಾಗಿದ್ದು ಪೋಲಿಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..