ನ್ಯೂಸ್ ಆ್ಯರೋ : ಈ ಬಾರಿಯ ಟಿ20 ವಿಶ್ವಕಪ್ ಪಂದ್ಯಾವಳಿ ಆರಂಭವಾಗುತ್ತಲೇ ಅಚ್ಚರಿಯ ಫಲಿತಾಂಶಗಳಿಗೆ ಸಾಕ್ಷಿಯಾಗುತ್ತಿದೆ. ನಿನ್ನೆಯಷ್ಟೇ ಕ್ರಿಕೆಟ್ ದಿಗ್ಗಜರನ್ನೊಳಗೊಂಡ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿದ ಐರ್ಲೆಂಡ್ ಕ್ರಿಕೆಟ್ ತಂಡವು ವಿಂಡೀಸ್ ಅನ್ನು ಟೂರ್ನಿಯಿಂದಲೇ ಹೊರಗಟ್ಟಿತ್ತು. ಅದೇ ರೀತಿ ಇಂದೂ ಕೂಡ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ನ್ಯೂಜಿಲೆಂಡ್ ಭಾರೀ ಅಂತರದ ಜಯ ಗಳಿಸಿ ಅಚ್ಚರಿಯ ಫಲಿತಾಂಶ ನೀಡಿದೆ.
ಇಂದು ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾಕ್ಕೆ ನ್ಯೂಜಿಲೆಂಡ್ ತಂಡ (200-3) ಬೃಹತ್ ಮೊತ್ತದ ಗುರಿ ನೀಡಿತ್ತು.
ಗೆಲುವಿನ ಗುರಿ ಪಡೆದು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡದ ಬ್ಯಾಟರ್ ಗಳ ನೀರಸ ಪ್ರದರ್ಶನದಿಂದ 17.1 ಒವರ್ ಗೆ (111-10) ಆಲೌಟ್ ಕಂಡಿದ್ದು, ನ್ಯೂಜಿಲೆಂಡ್ ತಂಡ ಭರ್ಜರಿ 89 ರನ್ ಅಂತರದಿಂದ ಗೆದ್ದು ಬೀಗಿದೆ.
ಇನ್ನು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್’ನ ಪರ ಪಂದ್ಯಶ್ರೇಷ್ಠ ಪ್ರಶಸ್ತಿ ಗೆ ಭಾಜನರಾದ ಡೆವೋನ್ ಕಾನ್ವೇ ಅವರ ಅಮೊಘ 92(58) ರನ್ ಮತ್ತು ಉತ್ತಮ ಬೌಲಿಂಗ್ ಪ್ರದರ್ಶನ ನೆರವಿನಿಂದ ನ್ಯೂಜಿಲೆಂಡ್ ಆಸ್ಟ್ರೇಲಿಯಾ ವಿರುದ್ಧ ನಿರಾಯಾಸವಾಗಿ ಗೆಲುವು ಸಾಧಿಸಿತು.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..