ನ್ಯೂಸ್ ಆ್ಯರೋ : ಆರಂಭಿಕರಾದ ಮೊಹಮ್ಮದ್ ರಿಜ್ವಾನ್ ಹಾಗೂ ಬಾಬರ್ ಆಜಂ ಅರ್ಧಶತಕದ ಸಹಾಯದಿಂದ ಪಾಕಿಸ್ತಾನ ತಂಡವು ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್‌ಗಳಿಂದ ಗೆಲುವು ಸಾಧಿಸಿ, 2022ರ ಟಿ20 ವಿಶ್ವಕಪ್ ಟೂರ್ನಿಯ ಫೈನಲ್‌ಗೆ ಎಂಟ್ರಿ ಕೊಟ್ಟಿದೆ.
ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡವು 4 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿದೆ. ಡೇರಿಲ್ ಮಿಚೆಲ್ 53 ರನ್ ಹಾಗೂ ನಾಯಕ ಕೇನ್ ವಿಲಿಯಮ್ಸನ್ 46 ರನ್ ಗಳಿಸಿದ್ದರು.
153 ರನ್‌ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡವು 19.1 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿ ಗೆಲುವು ಸಾಧಿಸಿತು. ಪಾಕಿಸ್ತಾನದ ಪರ ಆರಂಭಿಕ ಜೋಡಿಗಳಾದ ಮೊಹಮ್ಮದ್ ರಿಜ್ವಾನ್ 57 ರನ್ ಹಾಗೂ ಬಾಬರ್ ಆಜಂ 53 ರನ್ ಗಳಿಸಿದರೆ, ಮೊಹಮ್ಮದ್ ಹಾರಿಸ್ 30 ರನ್ ದಾಖಲಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.
2022ರ ಟಿ20 ವಿಶ್ವಕಪ್ ಟೂರ್ನಿಯ ಭಾಗವಾಗಿ ನಾಳೆ (ಗುರುವಾರ) ಭಾರತ ಹಾಗೂ ಇಂಗ್ಲೆಂಡ್ ನಡುವೆ ಎರಡನೇ ಸೆಮಿಫೈನಲ್ ಪಂದ್ಯವು ನಡೆಯಲಿದೆ. ಇದರಲ್ಲಿ ಗೆಲುವು ಸಾಧಿಸುವ ತಂಡವು ಪಾಕಿಸ್ತಾನದ ವಿರುದ್ಧ ಫೈನಲ್ ಫೈಟ್ ನಡೆಸಲಿದೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..