1. Home
  2. Sports
  3. News
  4. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ – ಎರಡು ಹೊಸಮುಖಗಳ ಅಚ್ಚರಿಯ ಆಯ್ಕೆ

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ – ಎರಡು ಹೊಸಮುಖಗಳ ಅಚ್ಚರಿಯ ಆಯ್ಕೆ

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ – ಎರಡು ಹೊಸಮುಖಗಳ ಅಚ್ಚರಿಯ ಆಯ್ಕೆ
0

ನ್ಯೂಸ್ ಆ್ಯರೋ : ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಎಡಗೈ ಆರಂಭಕಾರ ಶಿಖರ್ ಧವನ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿದ್ದು, ಉಪನಾಯಕನಾಗಿ ಶ್ರೇಯಸ್ ಅಯ್ಯರ್ ಅವರನ್ನು ನೇಮಿಸಲಾಗಿದೆ.

ಅಚ್ಚರಿಯೆಂಬಂತೆ RCB ಆಟಗಾರ ರಜತ್ ಪಾಟಿದಾರ್ ಮತ್ತು ಮುಕೇಶ್ ಕುಮಾರ್ ಏಕದಿನ ಸರಣಿಗಾಗಿ ತಂಡದಲ್ಲಿ ಆಯ್ಕೆ ಆಗಿದ್ದಾರೆ. ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಕುಲ್ದೀಪ್ ಯಾದವ್ ಕೂಡ ಏಕದಿನ ಸರಣಿಗಾಗಿ ಕಮ್ ಬ್ಯಾಕ್ ಮಾಡಿದ್ದಾರೆ.

ಮೂರು ಪಂದ್ಯಗಳ ಈ ಸರಣಿಯ ಮೊದಲ ಏಕದಿನ ಪಂದ್ಯ ಅಕ್ಟೋಬರ್ 6 ರಂದು ನಡೆಯಲಿದ್ದು, ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ ಅಕ್ಟೋಬರ್ 11 ರಂದು ನಡೆಯಲಿದೆ. ಅತ್ತ ವಿಶ್ವಕಪ್ ನಲ್ಲಿ ಭಾಗವಹಿಸಲಿರುವ ಭಾರತ ತಂಡ ಅಕ್ಟೋಬರ್ 10 ರಂದು ಆಸ್ಟ್ರೇಲಿಯಾಕ್ಕೆ ತೆರಳಲಿದೆ.

ಭಾರತ ತಂಡ ಇಂತಿದೆ.
ಶಿಖರ್ ಧವನ್ (ನಾಯಕ), ಶ್ರೇಯಸ್ ಅಯ್ಯರ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ಡಬ್ಲ್ಯುಕೆ), ಸಂಜು ಸ್ಯಾಮ್ಸನ್ (ಡಬ್ಲ್ಯುಕೆ), ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಮುಕೇಶ್ ಕುಮಾರ್ , ಅವೇಶ್ ಖಾನ್, ಮೊಹಮ್ಮದ್. ಸಿರಾಜ್, ದೀಪಕ್ ಚಹಾರ್.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..