ನ್ಯೂಸ್ ಆ್ಯರೋ : ಮಂಗಳೂರು ಮೂಲದ ವಿವಾಹಿತ ಯುವಕನೊಬ್ಬ ತನ್ನ ಪ್ರೇಯಸಿಯೊಂದಿಗೆ ಸುಳ್ಯದ ಗಾಂಧಿನಗರದ ಲಾಡ್ಜ್ ಒಂದರಲ್ಲಿ ಬಂದು ತಂಗಿದ್ದ ಮಾಹಿತಿ ಪಡೆದ ಯುವಕನ ಪತ್ನಿ ಕಳೆದ ಸಂಜೆ ಸುಳ್ಯಕ್ಕೆ ಬಂದು ಅವರು ತಂಗಿದ್ದ ಖಾಸಗಿ ಲಾಡ್ಜ್ ಬಳಿ ಗದ್ದಲವೆಬ್ಬಿಸಿರುವ ಬಗ್ಗೆ ವರದಿಯಾಗಿದೆ.
ಖಾಸಗಿ ಲಾಡ್ಜ್ ನಲ್ಲಿದ್ದ ತನ್ನ ಪ್ರೇಯಸಿಯ ಜೊತೆಗಿದ್ದ ವಿವಾಹಿತ ಯುವಕ ತನ್ನ ಪತ್ನಿ ಲಾಡ್ಜ್‌ನ ರಿಸೆಪ್ಶನ್ ಬಳಿಗೆ ಬಂದು ನಿಂತಿರುವ ವಿಷಯ ತಿಳಿದು ಪ್ರೇಯಸಿಯೊಂದಿಗೆ ಲಾಡ್ಜ್ ನಿಂದ ಹೊರಗೆ ಬಂದಿದ್ದಾರೆ.
ಈ ವೇಳೆ ಜೋಡಿಯನ್ನು ನೋಡಿದ ಆತನ ಹೆಂಡತಿ ರಸ್ತೆಯಲ್ಲಿ ಗಂಡನನ್ನು ಮತ್ತು ಆ ಯುವತಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಈ ವೇಳೆ ನೂರಾರು ಜನ ಜಮಾಯಿಸಿದ್ದು, ಕೋಪಗೊಂಡಿದ್ದ ಪತ್ನಿಯನ್ನು ಸಮಾಧಾನಪಡಿಸಲು ಯುವಕ ಎಷ್ಟೇ ಪ್ರಯತ್ನ ಪಟ್ಟರೂ ಆಕೆ ಸಮಾಧಾನಗೊಂಡಿಲ್ಲ.
ಬಳಿಕ ಪತಿ ಹಾಗೂ ಮತ್ತವನ ಪ್ರೇಯಸಿಯನ್ನು ರಸ್ತೆಯಲ್ಲಿ ಎಳೆದಾಡಿದ ಮಹಿಳೆ ತನ್ನ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಕೊನೆಗೆ ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಮೂವರನ್ನೂ ಠಾಣೆಗೆ ಕರೆದೊಯ್ದಿದ್ದು, ಮಾತುಕತೆಯ ಬಳಿಕ ಬಿಟ್ಟು ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.