ಒಪ್ಪೊ A17 ಸ್ಮಾರ್ಟ್ ಫೋನ್ ಬಿಡುಗಡೆ – ಇದರ ಬೆಲೆ ಎಷ್ಟು? ಇದರ ಅದ್ಭುತ ಫೀಚರ್ಸ್ ಗಳ ವಿವರಣೆ ಇಲ್ಲಿದೆ..

ನ್ಯೂಸ್ ಆ್ಯರೋ : ಭಾರತದ ದೇಶೀಯ ಮಾರುಕಟ್ಟೆಯಲ್ಲಿ ಒಪ್ಪೋ ಕಂಪೆನಿ ಜನಪ್ರಿಯ ಸ್ಮಾರ್ಟ್‌ಫೋನ್ ಬ್ರ್ಯಾಂಡ್‌ಗಳಲ್ಲಿ ಒಂದಾಗಿದೆ. ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಟೆಕ್ ಮಾರುಕಟ್ಟೆಗೆ A ಸರಣಿಯಲ್ಲಿ ಹೊಸ ಒಪ್ಪೋ A17 ಸ್ಮಾರ್ಟ್‌ಫೋನ್ ಪರಿಚಯಿಸಿದ್ದು, ಇದರ ಫೀಚರ್ಸ್ ನಿಜಕ್ಕೂ ದಂಗುಬಡಿಸುವಂತಿದೆ.

ಇದು ಬಜೆಟ್ ಪ್ರೈಸ್‌ಟ್ಯಾಗ್ ಅನ್ನು ಹೊಂದಿದ್ದು, ಆಕರ್ಷಕ ವಿನ್ಯಾಸವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹೆಲಿಯೊ G35 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಒಪ್ಪೋ ಕಂಪೆನಿ ಹೊಸ ಒಪ್ಪೋ A17 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದು ಫ್ಲಾಟ್ ಬ್ಯಾಕ್ ಮತ್ತು ಫ್ಲಾಟ್ ಎಡ್ಜ್‌ನೊಂದಿಗೆ ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಅನ್ನೋದನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಒಪ್ಪೋ A17 ಸ್ಮಾರ್ಟ್‌ಫೋನ್ 6.56 ಇಂಚಿನ ಹೆಚ್‌ಡಿ ಪ್ಲಸ್ LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, 100% DCI-P3 ಕಲರ್ ಗ್ಯಾಮಟ್ ರೇಂಜ್ ಅನ್ನು ಹೊಂದಿದೆ. ಇದು ವಾಟರ್-ಡ್ರಾಪ್ ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಒಳಗೊಂಡಿದೆ.
ಒಪ್ಪೋ A17 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹೆಲಿಯೊ G35 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಬೆಂಬಲವನ್ನು ಪಡೆದಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256 GBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ.
ಈ ಫೋನ್ ನಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಇದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ ವೀಡಿಯೋ ಕರೆಗಳು ಹಾಗೂ ಸೆಲ್ಫಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI, 360 ಡಿಗ್ರಿ ಫಿಲ್ ಲೈಟ್, ಪೋರ್ಟ್ರೇಟ್ ರಿಟೌಚಿಂಗ್, HDR ಅನ್ನು ಒಳಗೊಂಡಿದೆ.
ಅಲ್ಲದೇ ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಮತ್ತು ಸೂಪರ್ ನೈಟ್‌ಟೈಮ್ ಸ್ಟ್ಯಾಂಡ್‌ಬೈ ಅನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, USB-C ಅನ್ನು ಹೊಂದಿದೆ. ಇದಲ್ಲದೆ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಆಕ್ಸಿಲೆರೋಮೀಟರ್ ಅನ್ನು ಒಳಗೊಂಡಿದೆ.
ಸದ್ಯ ಈ ಫೋನ್ ಮಲೇಷ್ಯಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಮಲೇಷ್ಯಾದಲ್ಲಿ ಈ ಸ್ಮಾರ್ಟ್‌ಫೋನಿನ ಬೆಲೆ MYR599 (ಸುಮಾರು 10,619ರೂ)ಆಗಿದೆ. ಇನ್ನು ಈ ಫೋನ್ ಲೇಕ್ ಬ್ಲೂ ಮತ್ತು ಮಿಡ್ನೈಟ್ ಬ್ಲಾಕ್ ಕಲರ್ ಆಯ್ಕೆಗಳಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್ ಭಾರತಕ್ಕೂ ಕೂಡ ಶೀಘ್ರದಲ್ಲೇ ಎಂಟ್ರಿ ನೀಡುವ ಸಾಧ್ಯತೆಯಿದೆ. ಆದರೆ ಬಿಡುಗಡೆಯ ದಿನಾಂಕ ಇನ್ನು ಕೂಡ ಬಹಿರಂಗವಾಗಿಲ್ಲ.