ನ್ಯೂಸ್ ಆ್ಯರೋ : ರಾಜೀವ್ ಗಾಂಧಿ ಹತ್ಯೆಯ ಪ್ರಮುಖ ಆರೋಪಿ ನಳಿನಿ ಶ್ರೀಹರನ್ ಸೇರಿದಂತೆ ಆರು ಜನರ ಆರೋಪಿಗಳನ್ನು ಸುಪ್ರೀಂ ಕೋರ್ಟ್ ಬಿಡುಗಡೆ ಮಾಡುವಂತೆ ಆದೇಶಿಸಿದೆ. ತಮಿಳುನಾಡು ಸರ್ಕಾರ ಆರೋಪಿಗಳನ್ನು ಬಿಡುಗಡೆ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು.
ಇದೀಗ ಸುಪ್ರೀಂ ಕೋರ್ಟ್ ಬಿಡುಗಡೆ ಮಾಡುವಂತೆ ಆದೇಶ ನೀಡಿದೆ. ಎಲ್‌ಟಿಟಿಇ ಪ್ರಭಾಕರನ್ ನೇತೃತ್ವದಲ್ಲಿ ರಾಜೀವ್ ಗಾಂಧಿ ಹತ್ಯೆಗೆ ಸಂಚು ರೂಪಿಸಿದ್ದರು. ಶ್ರೀಲಂಕಾ ಸರ್ಕಾರಕ್ಕೆ ಪರಭಾಕರನ್ ವಿರುದ್ಧ ಹೋರಾಡಲು ರಾಜೀವ್ ಗಾಂಧಿ ಸಹಾಯ ಮಾಡಿದ್ದರು. ಹಾಗೊಂದು ವೇಳೆ ರಾಜೀವ್ ಗಾಂಧಿ ಮುಂದಾಗದಿದ್ದರೆ ಚೀನಾ ಶ್ರೀಲಂಕಾದಲ್ಲಿ ಭದ್ರ ನೆಲೆ ಕಂಡುಕೊಳ್ಳುವ ಸಾಧ್ಯತೆಯಿತ್ತು. ಇದೇ ಕಾರಣಕ್ಕಾಗಿ ಎಲ್‌ಟಿಟಿಇ ರೆಬೆಲ್‌ಗಳ ವಿರುದ್ಧದ ಯುದ್ಧಕ್ಕೆ ಸೇನೆಯನ್ನು ರಾಜೀವ್ ಗಾಂಧಿ ಅನಿವಾರ್ಯವಾಗಿ ಕಳಿಸಬೇಕಾಯಿತು. ಇದೇ ಕಾರಣಕ್ಕೆ ಪ್ರಭಾಕರನ್ ರಾಜೀವ್ ಗಾಂಧಿ ಹತ್ಯೆ ಮಾಡಿಸಿದ್ದರು.
ಮೇ ತಿಂಗಳಲ್ಲಿ ಮತ್ತೊಬ್ಬ ದೋಷಿ ಪೆರಾರಿವಾಲನ್‌ನನ್ನು ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿತ್ತು. 1991ರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಯಲ್ಲದೆ ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಹಾಗೂ ರವಿಚಂದ್ರನ್ ಜೈಲು ಪಾಲಾಗಿದ್ದರು.
1991ರ ಮೇ 21ರ ರಾತ್ರಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಧನು ಎಂಬ ಮಹಿಳಾ ಆತ್ಮಾಹುತಿ ಬಾಂಬರ್ ಮಾಜಿ ಪ್ರಧಾನಿ ರಾಜೀವ್ ಗಾಂಧಿಯನ್ನು ಹತ್ಯೆ ಮಾಡಿದ್ದರು. ಇದೀಗ ಮಾಜಿ ಪ್ರಧಾನಿಯನ್ನು ಹತ್ಯೆ ಮಾಡಿದ ಅಪರಾಧಿಗಳನ್ನು ಇಂದು ಬಿಡುಗಡೆಗೊಳಿಸುವಂತೆ ಆದೇಶವನ್ನು ಸುಪ್ರೀಂ ಆದೇಶವನ್ನು ನೀಡಿದೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..