1. Home
  2. Top
  3. News
  4. ಪಿಎಫ್ಐ ಕಾರ್ಯಕರ್ತರ ಬಂಧನದ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಮಾಸ್ಟರ್ ಸ್ಟ್ರೋಕ್ – ಪಿಎಫ್ಐ ಸೇರಿ ಎಂಟು ಸಂಘಟನೆಗಳು ಬ್ಯಾನ್

ಪಿಎಫ್ಐ ಕಾರ್ಯಕರ್ತರ ಬಂಧನದ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಮಾಸ್ಟರ್ ಸ್ಟ್ರೋಕ್ – ಪಿಎಫ್ಐ ಸೇರಿ ಎಂಟು ಸಂಘಟನೆಗಳು ಬ್ಯಾನ್

ಪಿಎಫ್ಐ ಕಾರ್ಯಕರ್ತರ ಬಂಧನದ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಮಾಸ್ಟರ್ ಸ್ಟ್ರೋಕ್ – ಪಿಎಫ್ಐ ಸೇರಿ ಎಂಟು ಸಂಘಟನೆಗಳು ಬ್ಯಾನ್
0

ನ್ಯೂಸ್ ಆ್ಯರೋ : ಎನ್ಐಎ ಸಾಲು ಸಾಲು ದಾಳಿ ನಡೆಸಿ ನೂರಾರು ಪಿಎಫ್ಐ ಕಾರ್ಯಕರ್ತರನ್ನು ಬಂಧಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರದ ಗೃಹ ಇಲಾಖೆ ಪಿಎಫ್‌ಐ ಸಂಘಟನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐದು ವರ್ಷ ಬ್ಯಾನ್ ಮಾಡಿದೆ.

ಕಾನೂನು ಬಾಹಿರ ಸಂಘಟನೆ ಎಂದು PFI(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳು ಅಥವಾ ರಂಗಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಬ್ಯಾನ್ ಮಾಡಲಾಗಿದೆ ಎಂದು ಸರ್ಕಾರ ಘೋಷಿಸಿದೆ.

ಇತ್ತೀಚೆಗಷ್ಟೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ಮಾಡಿದ್ದ ಎನ್‌ಐಎ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು.

ಅಲ್ಲದೆ, ಸಂಘಟನೆಗೆ ಸೇರಿದ ಹಲವು ಮುಖಂಡರು, ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಪಿಎಫ್‌ಐಗೆ ಮತ್ತೊಂದು ಶಾಕ್ ನೀಡಲಾಗಿದ್ದು, ಐದು ವರ್ಷ ಬ್ಯಾನ್ ಮಾಡಲಾಗಿದೆ. ಪಿಎಫ್’ಐ ವಿರುದ್ಧ ಅನೇಕ ದೇಶ ವಿರೋಧಿ ಕೃತ್ಯದ ಆರೋಪ ಕೇಳಿಬಂದಿತ್ತು. ಈ ಸಂಘಟನೆಯನ್ನು ಬ್ಯಾನ್ ಮಾಡಬೇಕೆಂಬ ಆರೋಪಗಳು ಕೂಡ ಕೇಳಿಬಂದಿದ್ದವು. ಇದೀಗ ಕೇಂದ್ರ ಸರ್ಕಾರ ಪಿಎಫ್’ಐ ಸೇರಿ 8 ಸಂಘಟನೆಗಳನ್ನು ಬ್ಯಾನ್ ಮಾಡಿ ಆದೇಶಿಸಿದೆ.

PFI ಯ ಸಹವರ್ತಿ ಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್(RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ(CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್(AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್(NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್, ಕೇರಳ ಇವುಗಳನ್ನು ಸಹ ನಿಷೇಧಿಸಲಾಗಿದೆ.

ಹಲವು ರಾಜ್ಯಗಳು ಒತ್ತಾಯ, ತನಿಖಾ ಸಂಸ್ಥೆಗಳ ವರದಿ ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 22 ಮತ್ತು ಸೆಪ್ಟೆಂಬರ್ 27 ರಂದು ರಾಷ್ಟ್ರೀಯ ತನಿಖಾ ಸಂಸ್ಥೆ(NIA), ಜಾರಿ ನಿರ್ದೇಶನಾಲಯ(ED) ಮತ್ತು ರಾಜ್ಯ ಪೊಲೀಸರು PFI ಕಚೇರಿ ಮತ್ತು ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿದ್ದರು. ಮೊದಲ ಸುತ್ತಿನ ದಾಳಿಯಲ್ಲಿ ಪಿಎಫ್‌ಐಗೆ ಸೇರಿದ 106 ಮಂದಿಯನ್ನು ಬಂಧಿಸಲಾಗಿತ್ತು. ಎರಡನೇ ಸುತ್ತಿನ ದಾಳಿಯಲ್ಲಿ PFI ಗೆ ಸೇರಿದ 247 ಜನರನ್ನು ಬಂಧಿಸಲಾಗಿದೆ. ತನಿಖಾ ಸಂಸ್ಥೆಗಳ ಸಾಕಷ್ಟು ಪುರಾವೆಗಳ ಆಧಾರದ ಮೇಲೆ ಸಂಘಟನೆಗಳನ್ನು ನಿಷೇಧಿಸುವ ನಿರ್ಧಾರ ಸರ್ಕಾರ ತೆಗೆದುಕೊಂಡಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..