ಫಿನಿಷರ್ ದಿನೇಶ್ ಕಾರ್ತಿಕ್ ಮೈಮೇಲೆ ಕೈಹಾಕಿ ಅಸಭ್ಯವಾಗಿ ವರ್ತಿಸಿದ ಯುವತಿ – ಡಿಕೆ ಮಾಡಿದ್ದೇನು ಗೊತ್ತಾ..!? ವಿಡಿಯೋ ವೈರಲ್….

ನ್ಯೂಸ್ ಆ್ಯರೋ : ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳ ನಡುವಿನ ಟಿ20 ಸರಣಿಯ ಕೊನೆಯ ಪಂದ್ಯವನ್ನು ಭಾರತ ಗೆದ್ದು, ಸರಣಿ ವಶಪಡಿಸಿಕೊಂಡಿತ್ತು. 2-1 ಅಂತರದಿಂದ ಸರಣಿಯನ್ನು ಗೆದ್ದುಕೊಂಡ ಬಳಿಕ ಟ್ರೋಫಿ ಎತ್ತಿ ಹಿಡಿದು ಸಂಭ್ರಮಿಸಿದ ಟೀಮ್ ಇಂಡಿಯಾ ಆಟಗಾರರ ಬಳಿ ಯುವತಿಯೊಬ್ಬಳು ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು. ಈ ಯುವತಿಯು ದಿನೇಶ್ ಕಾರ್ತಿಕ್ ಜೊತೆ ತೋರಿದ ಅನುಚಿತ ವರ್ತನೆಯ ವಿಡಿಯೋ ಇದೀಗ ವೈರಲ್ ಆಗಿದೆ.
ಟೀಮ್ ಇಂಡಿಯಾ ಆಟಗಾರರು ವಿಜಯೋತ್ಸವದ ಬಳಿಕ ಮೈದಾನದಿಂದ ಡ್ರೆಸ್ಸಿಂಗ್ ರೂಮ್ನತ್ತ ತೆರಳುತ್ತಿದ್ದರು. ಇದೇ ವೇಳೆ ಯುವತಿಯೊಬ್ಬಳು ಫಿನಿಷರ್ ಖ್ಯಾತಿಯ ದಿನೇಶ್ ಕಾರ್ತಿಕ್ ಅವರ ಮೈ ಮುಟ್ಟಿದ್ದಾರೆ. ಇದರಿಂದ ಕುಪಿತಗೊಂಡ ಕಾರ್ತಿಕ್ ಯುವತಿಯನ್ನು ದಿಟ್ಟಿಸಿ ನೋಡಿದ್ದಾರೆ. ಅಲ್ಲದೇ ಅಲ್ಲಿದ್ದ ಮೈದಾನದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಲು ಮುಂದಾಗಿದ್ದರು.
ಅಷ್ಟರಲ್ಲಿ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್ ಮಧ್ಯೆ ಪ್ರವೇಶಿಸಿ ದಿನೇಶ್ ಕಾರ್ತಿಕ್ ಅವರನ್ನು ಸಮಾಧಾನಪಡಿಸುವ ಪ್ರಯತ್ನ ಮಾಡಿದರು. ಇದೀಗ ಈ ತೆರೆಮರೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮೈದಾನದಲ್ಲಿ ಕಾಣಿಸಿಕೊಂಡ ಯುವತಿಯು ಬಿಸಿಸಿಐ ಅಥವಾ ಟೀಮ್ ಇಂಡಿಯಾ ಸಿಬ್ಬಂದಿಗಳ ಭಾಗವೇ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಯುವತಿಯು ಟೀಮ್ ಇಂಡಿಯಾ ಮಹಿಳಾ ತಂಡದ ಜೆರ್ಸಿಯನ್ನು ಧರಿಸಿದ್ದಾರೆ. ಹೀಗಾಗಿ ಇದೀಗ ದಿನೇಶ್ ಕಾರ್ತಿಕ್ ಅವರೊಂದಿಗೆ ಮೈದಾನದಲ್ಲಿ ಅನುಚಿತವಾಗಿ ವರ್ತಿಸಿದ ಯುವತಿ ಯಾರು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದ್ದು, ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.